ಬಲೂಚಿಸ್ತಾನದಲ್ಲಿ ಆತ್ಮಹತ್ಯಾ ದಾಳಿ: 4 ಸಾವು
ಕರಾಚಿ, ನ. 25: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಶನಿವಾರ ಭದ್ರತಾ ಪಡೆಗಳನ್ನು ಗುರಿಯಾಗಿಸಿ ನಡೆದ ಆತ್ಮಹತ್ಯಾ ದಾಳಿಯೊಂದರಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಹಾಗೂ 19 ಮಂದಿ ಗಾಯಗೊಂಡಿದ್ದಾರೆ.
ಪ್ರಾಂತೀಯ ರಾಜಧಾನಿ ಕ್ವೆಟ್ಟದಲ್ಲಿರುವ ಸರಿಯಬ್ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಭದ್ರತಾ ಪಡೆಗಳ ವಾಹನಗಳ ಸಾಲಿನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.
ಗಾಯಗೊಂಡವರ ಪೈಕಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಕ್ವೆಟ್ಟದ ಆಸ್ಪತ್ರೆಯೊಂದರ ವಕ್ತಾರರೊಬ್ಬರು ತಿಳಿಸಿದರು.
Next Story