ಶೀಘ್ರವೇ ಟ್ರಂಪ್-ಪುಟಿನ್ ಭೇಟಿ: ಪಾಂಪಿಯೊ
ವಾಶಿಂಗ್ಟನ್, ಜೂ. 24: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೀಘ್ರದಲ್ಲೇ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ರನ್ನು ಭೇಟಿಯಾಗಲಿದ್ದಾರೆ ಎಂದು ಅಮೆರಿಕ ವಿದೇಶ ಕಾರ್ಯದರ್ಶಿ ಮೈಕ್ ಪಾಂಪಿಯೊ ಹೇಳಿದ್ದಾರೆ.
ಭೇಟಿ ಸಾಧ್ಯತೆ ಬಗ್ಗೆ ಚರ್ಚಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಮುಂದಿನ ವಾರ ಮಾಸ್ಕೊಗೆ ಪ್ರಯಾಣಿಸಲಿದ್ದಾರೆ ಎಂದು ಶ್ವೇತಭವನ ಗುರುವಾರ ಹೇಳಿರುವುದನ್ನು ಸ್ಮರಿಸಬಹುದಾಗಿದೆ.
‘‘ಬೋಲ್ಟನ್ ರವಿವಾರ ಅಥವಾ ಸೋಮವಾರ ಮಾಸ್ಕೊಗೆ ಪ್ರಯಾಣಿಸಲಿದ್ದಾರೆ. ಅವರು ಅಲ್ಲಿ ರಶ್ಯದ ರಾಷ್ಟ್ರೀಯ ಭದ್ರತಾ ಸಲಹೆಗಾರನನ್ನು ಭೇಟಿಯಾಗುತ್ತಾರೆ. ಈ ಭೇಟಿಯ ಬಳಿಕ ಹೆಚ್ಚು ತಡವಿಲ್ಲದೆ ಟ್ರಂಪ್ ರಶ್ಯದ ಅಧ್ಯಕ್ಷರನ್ನು ಭೇಟಿಯಾಗುತ್ತಾರೆ ಎಂದು ನನಗೆ ಅನಿಸುತ್ತದೆ’’ ಎಂದು ಎಂಎಸ್ಎನ್ಬಿಸಿ ಚಾನೆಲ್ಗೆ ನೀಡಿದ ಸಂದರ್ಶನವೊಂದರಲ್ಲಿ ಪಾಂಪಿಯೊ ಹೇಳಿದ್ದಾರೆ.
Next Story