ಇಂಡೋನೇಶ್ಯ: ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 22 ಸಾವು
ಜಕಾರ್ತ, ಅ. 13: ಪಶ್ಚಿಮ ಇಂಡೋನೇಶ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ದಿಢೀರ್ ನೆರೆ ಮತ್ತು ಭೂಕುಸಿತಗಳಲ್ಲಿ ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದುದ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.
ಬುಧವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾತ್ರ ದ್ವೀಪದ ಹಲವು ಜಿಲ್ಲೆಗಳಲ್ಲಿ ಪ್ರವಾಹ ತಲೆದೋರಿದ್ದು ಭೂಕುಸಿತಗಳೂ ಸಂಭವಿಸಿವೆ.
ಉತ್ತರ ಸುಮಾತ್ರ ಪ್ರಾಂತದಲ್ಲಿ ಕಳೆದ ಮೂರು ದಿನಗಳ ಅವಧಿಯಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಪಶ್ಚಿಮ ಸುಮಾತ್ರದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ.
Next Story