ಲಂಕಾದಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ; 15 ಸಾವು
ಕೊಲಂಬೊ, ಎ.27: ಶ್ರೀಲಂಕಾದ ಕಲ್ಮುನಾಯ್ ಎಂಬಲ್ಲಿ ಶುಕ್ರವಾರ ರಾತ್ರಿ ಶಂಕಿತ ಉಗ್ರರ ಅಡಗು ತಾಣಗಳ ಮೇಲೆ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ 15 ಮಂದಿ ಮಂದಿ ಸಾವಿಗೀಡಾಗಿದ್ದಾರೆ.
ಮೃತಪಟ್ಟವರಲ್ಲಿ ಮೂವರು ಉಗ್ರರು ,6 ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ.
ಮನೆಯೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿಯಾನ್ನಾಧರಿಸಿ ಭದ್ರತಾ ಪಡೆ ದಾಳಿ ನಡೆಸಿದಾಗ ಉಗ್ರರು ಯೋಧರ ಮೇಲೆ ದಾಳಿ ನಡೆಸಿದ್ದಾರೆ.ಯೋಧರು ಪ್ರತಿ ದಾಳಿ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story