ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಕಾಯುತ್ತಿದ್ದಾಗ ಸ್ಫೋಟ: 6 ಸಾವು
ಕಾಬೂಲ್, ಜು. 19: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಕಾಬೂಲ್ ವಿಶ್ವವಿದ್ಯಾನಿಲಯ ಆವರಣದ ದ್ವಾರದ ಬಳಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟವೊಂದರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಹಾಗೂ ಕನಿಷ್ಠ 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಕಾಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸ್ಫೋಟಕ್ಕೆ ತಕ್ಷಣಕ್ಕೆ ಯಾರೂ ಹೊಣೆ ಹೊತ್ತುಕೊಂಡಿಲ್ಲ. ಇದಕ್ಕೂ ಕೆಲವು ಗಂಟೆಗಳ ಮೊದಲು ತಾಲಿಬಾನ್ ಭಯೋತ್ಪಾದಕರು ಕಂದಹಾರ್ನ ಪೊಲೀಸ್ ಪ್ರಧಾನ ಕೇಂದ್ರದ ಹೊರಗೆ ಎರಡು ಬಾಂಬ್ಗಳನ್ನು ಸ್ಫೋಟಿಸಿದ್ದು, ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ ಹಾಗೂ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಸ್ಫೋಟ ನಡೆದ ಸ್ಥಳದಲ್ಲೇ ಇಡಲಾಗಿದ್ದ ಇನ್ನೊಂದು ಬಾಂಬನ್ನು ಭದ್ರತಾ ಪಡೆ ಸಿಬ್ಬಂದಿ ನಿಷ್ಕ್ರಿಯಗೊಳಿಸಿದ್ದಾರೆ.
Next Story