ಪಾಕಿಸ್ತಾನ: ದಿಢೀರ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 43
ಇಸ್ಲಾಮಾಬಾದ್, ಜು. 4: ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವ ಪ್ರಾಂತದಲ್ಲಿ ತಲೆದೋರಿದ ದಿಢೀರ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ರವಿವಾರ 43ಕ್ಕೇರಿದೆ. 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಹಾಗೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.
ಚಿತ್ರಲ್ ಜಿಲ್ಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದ್ದು, 31 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಾಂತೀಯ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಹೇಳಿದೆ.
‘‘ಬೆಟ್ಟದಿಂದ ಇಳಿದು ಬಂದ ಪ್ರವಾಹ ಒಂದು ಮಸೀದಿ, ಪಾಕಿಸ್ತಾನಿ ಸೇನೆಯ ಒಂದು ತಪಾಸಣಾ ಠಾಣೆ ಮತ್ತು ಸಮೀಪದ ಮನೆಗಳನ್ನು ಕೊಚ್ಚಿಕೊಂಡು ಹೋಗಿದೆ’’ ಎಂದು ಪ್ರಾಧಿಕಾರದ ಹೇಳಿಕೆ ತಿಳಿಸಿದೆ.
Next Story