ಲಂಕಾದಲ್ಲಿ ಭಾರೀ ಮಳೆ: 91 ಸಾವು
ಕೊಲಂಬೊ, ಮೇ 26: ಪಶ್ಚಿಮ ಮತ್ತು ದಕ್ಷಿಣ ಶ್ರೀಲಂಕಾದಲ್ಲಿ ಸುರಿಯುತ್ತಿರುವ ಭಾರೀ ಮುಂಗಾರು ಮಳೆ ಸೃಷ್ಟಿಸಿದ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಕನಿಷ್ಠ 91 ಮಂದಿ ಮೃತಪಟ್ಟಿದ್ದಾರೆ ಎಂದು ಸರಕಾರ ಶುಕ್ರವಾರ ತಿಳಿಸಿದೆ.
ಪ್ರಾಕೃತಿಕ ವಿಕೋಪದಿಂದ 7,800ಕ್ಕೂ ಅಧಿಕ ಮಂದಿ ಸಂತ್ರಸ್ತರಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಗೃಹ ವ್ಯವಹಾರಗಳ ಸಚಿವ ವಾಜಿರ ಅಭಯವರ್ದನ ಸುದ್ದಿಗಾರರಿಗೆ ತಿಳಿಸಿದರು.
Next Story