ಕಾಬೂಲ್, ಜ.6: ಅಫ್ಘಾನಿಸ್ತಾನದ ಕಾಬೂಲ್ ನ ಹೆರಾತ್ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ ಏಳು ಮಂದಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಆಟೋದಲ್ಲಿ ಬಾಂಬ್ ಇರಿಸಿ ಉಗ್ರರು ಈ ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.