ಪಾಕ್: ಮುಂಗಾರು ಮಳೆಗೆ 164 ಮಂದಿ ಬಲಿ
ಇಸ್ಲಾಮಾಬಾದ್, ಸೆ. 7: ಹಾಲಿ ಮುಂಗಾರು ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಲ್ಲಿ 39 ಮಕ್ಕಳು ಸೇರಿದಂತೆ 164 ಮಂದಿ ಮೃತಪಟ್ಟಿದ್ದಾರೆ ಎಂದು ಹವಾಮಾನ ಅಧಿಕಾರಿಗಳು ಹೇಳಿದ್ದಾರೆ.
ಈ ಅವಧಿಯಲ್ಲಿ ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಮತ್ತು ಪ್ರಾಂತೀಯ ಸರಕಾರದ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಂಡಿವೆ.
Next Story