36 ಕೆಜಿ ಗಾಂಜಾ ವಶ: ಎಂಟು ಮಂದಿ ಆರೋಪಿಗಳ ಬಂಧನ
ಬೆಂಗಳೂರು, ಅ. 23: ಹೊರ ರಾಜ್ಯಗಳಿಂದ ಗಾಂಜಾ ತಂದು ನಗರ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಎಂಟು ಮಂದಿಯನ್ನು ಬಂಧಿಸಿ ಬರೋಬ್ಬರಿ 36 ಕೆಜಿ ಗಾಂಜಾ ವಶಕ್ಕೆ ಪಡೆಯುವಲ್ಲಿ ವೈಟ್ ಫೀಲ್ಡ್ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್, ಅಸ್ಸಾಂ, ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಿಂದ ನಗರಕ್ಕೆ ಗಾಂಜಾ ತಂದು ಮಾರಾಟ ಮಾಡುವ ಬೃಹತ್ ಜಾಲವನ್ನು ವೈಟ್ ಫೀಲ್ಡ್ ಪೊಲೀಸರು ಪತ್ತೆಹಚ್ಚಿದ್ದು, ಪ್ರಕರಣ ಸಂಬಂಧ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮ್ಜದ್ ಖಾನ್, ಗಗನ್ ಕುಮಾರ್, ಬಿಜಯ್ ನಾಯಕ್, ಕುಮಾರ್ ಬಿಸ್ವಾಸ್, ನಿತೇಶ್, ಇಮ್ರಾನ್, ಅನಿಲ್ ಕುಮಾರ್ ಬಂಧಿತರು ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ವೈಟ್ ಫೀಲ್ಡ್ ಡಿಸಿಪಿ ಅಬ್ದುಲ್ ಅಹದ್ ಸೇರಿ ಪ್ರಮುಖರಿದ್ದರು.
Next Story