ಎಸೆಸೆಲ್ಸಿ ಪರೀಕ್ಷೆ ಹಿನ್ನೆಲೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಬೆಂಗಳೂರು, ಮಾ.17: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ ಮಂಡಳಿ ವತಿಯಿಂದ ಎಸೆಸೆಲ್ಸಿ ಪರೀಕ್ಷೆಗಳು ಮಾ.23ರಿಂದ ಎ.6ರವರೆಗೂ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಹೊರಡಿಸಲಾಗಿದೆ.
ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಕಲಂ 144ನೇ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಅದೇ ರೀತಿ, ಪರೀಕ್ಷಾ ಕೇಂದ್ರ ವ್ಯಾಪ್ತಿಯ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30ರವರೆಗೂ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story