ಬೆಂಗಳೂರು: ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ
ಬೆಂಗಳೂರು, ಮಾ.20: ಮಾದಿಗ ಜನಾಂಗಕ್ಕೆ ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಮಾದಿಗ ದಂಡೋರ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಿಗ ದಂಡೋರದ ಅಧ್ಯಕ್ಷ ಜೆ.ನರಸಿಂಹಮೂರ್ತಿ, ಇತ್ತೀಚಿಗೆ ಆರಂಭವಾದ ಲಿಂಗಾಯತ ಪ್ರತ್ಯೇಕ ಧರ್ಮದ ಚಳವಳಿಗೆ ಮಣಿದ ಸರಕಾರ ಸಂಪುಟದಲ್ಲಿ ತೀರ್ಮಾನ ಮಾಡಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಆದರೆ, ಕಳೆದ 10 ವರ್ಷಗಳಿಂದ ನಿರಂತರವಾಗಿ ಸದಾಶಿವ ಆಯೋಗದ ವರದಿ ಜಾರಿ ಮಾಡಬೇಕು ಎಂದು ಹೋರಾಟ ಮಾಡುತ್ತಿದ್ದರೂ ಸರಕಾರ ಇದನ್ನು ಕಡೆಗಣಿಸಿದೆ ಎಂದು ದೂರಿದರು.
Next Story