ಬೆಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ವ್ಯಕ್ತಿಯ ಬಂಧನ
ಬೆಂಗಳೂರು, ಮಾ.24: ಯುವಕನೋರ್ವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೋಣನಕುಂಟೆಯಲ್ಲಿ ನಡೆದಿದೆ ಎನ್ನಲಾಗಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಚುಚ್ಚಘಟ್ಟದ ವೆಂಕಟೇಶ (25)ನನ್ನು ಶನಿವಾರ ಬಂಧಿಸಲಾಗಿದೆ. ಹೂವಿನ ಅಲಂಕಾರ ಮಾಡುತ್ತಿದ್ದ ಆರೋಪಿಯು 9ನೆ ತರಗತಿಗೆ ಶಾಲೆ ಬಿಟ್ಟಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು 6 ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ. ಪರಿಚಯದ ಹಿನ್ನೆಲೆಯಲ್ಲಿ ಬಾಲಕಿಯ ಮನೆಗೆ ಹೋಗಿ ಬರುತ್ತಿದ್ದ ಆರೋಪಿಯು ನಂಬಿಕೆ ಹುಟ್ಟಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಬಾಲಕಿಯು ತನ್ನ ತಂದೆ ಗಂಗಾಧರ ಬಳಿ ವಿಷಯ ತಿಳಿಸಿದ್ದು, ಈ ಸಂಬಂಧ ಕೋಣನಕುಂಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Next Story