ಬೆಂಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 42 ಲಕ್ಷ ನಗದು ವಶಕ್ಕೆ
ಬೆಂಗಳೂರು, ಎ.22: ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 42 ಲಕ್ಷ ರೂ. ಹಣವನ್ನು ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರ ಚೆಕ್ ಪೋಸ್ಟ್ನಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.
ರವಿವಾರ ಬೆಳಗ್ಗೆ ತಪಾಸಣೆ ನಡೆಸಿದ ವೇಳೆ ಆಂಧ್ರ ಕಡೆಯಿಂದ ಬಂದ ಕಲ್ಲಡ ಹೆಸರಿನ ಖಾಸಗಿ ಬಸ್ನಲ್ಲಿ ಈ ಹಣ ಪತ್ತೆಯಾಗಿದೆ. ಕೇರಳ ಮೂಲದ ವ್ಯಕ್ತಿಯಿಂದ ಈ ಹಣ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ನಗದು ಹಾಗೂ ಓರ್ವನನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಖಾಸಗಿ ಬಸ್ಗಳಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗುತ್ತಿದೆ.ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳ್ಳಲಾಗಿದೆ.
Next Story