ಉಪಮುಖ್ಯಮಂತ್ರಿಯಾಗಿ ನಾಳೆ ಪರಮೇಶ್ವರ್ ಪ್ರಮಾಣವಚನ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಮೇ 22: ನಾಳೆ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ ಸಂಪುಟ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್-ಕಾಂಗ್ರೆಸ್ ನಾಯಕರ ಸಭೆ ನಡೆದ ಬಳಿಕ ಎಚ್ ಡಿಕೆ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಕೆ.ಆರ್.ರಮೇಶ್ ಕುಮಾರ್ ಸ್ಪೀಕರ್ ಆಗಲಿದ್ದಾರೆ.
Next Story