ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ: ಶಾಸಕ ಶಾಮನೂರು ಶಿವಶಂಕರಪ್ಪ
ಬೆಂಗಳೂರು, ಮೇ 24: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ತಮಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಯಾವುದೆ ಬೇಡಿಕೆಯನ್ನು ಇಟ್ಟಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟಣೆ ನೀಡಿದರು.
ಗುರುವಾರ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಒತ್ತಡಗಳು ನಡೆಯುವುದಿಲ್ಲ ಎಂದರು.
ಉಪ ಮುಖ್ಯಮಂತ್ರಿ ಮಾಡಿದರೆ ಬೇಡ ಎನ್ನಲು ಸಾಧ್ಯವೇ? ಇಂದು ದೇವೇಗೌಡರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಯಾವುದೇ ಚರ್ಚೆಯನ್ನು ನಡೆಸಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
Next Story