ಟೆಕ್ಕಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರ ಬಂಧನ
ಬೆಂಗಳೂರು, ಮೇ 27: ಐಟಿ ಮಹಿಳಾ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಜೀವನ್ಭೀಮಾ ನಗರ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನಾಗರಬಾವಿ ನಿವಾಸಿಗಳಾದ ಬಿಲ್ಲಾಲ್ ಹುಸೇನ್ (23) ಹಾಗೂ ಆಲಿ ಅಹ್ಮದ್(28) ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಐಟಿ ಉದ್ಯೋಗಿಯೊಬ್ಬರಿಗೆ ಬೈಕ್ನಲ್ಲಿ ಬಂದ ಇಬ್ಬರು ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದರು ಎನ್ನಲಾಗಿದ್ದು, ಈ ಕುರಿತಂತೆ ಐಟಿ ಉದ್ಯೋಗಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಜೀವನ್ಭೀಮಾ ನಗರ ಪೊಲೀಸರು ಕಿರುಕುಳ ನೀಡಿದ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದ ದಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದಾರೆ.
Next Story