ಬೆಂಗಳೂರು: ಯುವಕನ ಮೇಲೆ ಹಲ್ಲೆ; ಆರೋಪ
ಬೆಂಗಳೂರು, ಜೂ.1: ಯುವಕನೊಬ್ಬನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಇಲ್ಲಿನ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಿವಾಸಿ ಪವನ್(23) ಎಂಬಾತನ ಮೇಲೆ ಹಲ್ಲೆ ನಡೆಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದಾರು ಮಂದಿ ದುಷ್ಕರ್ಮಿಗಳು ಮೇ. 24ರ ರಾತ್ರಿ ಪವನ್ ಎಂಬಾತನನ್ನು ಕೆ.ಆರ್.ಪುರಂನ ಕಲ್ಕೆರೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಪವನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ರಾಮಮೂರ್ತಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತನಿಖೆ ಕೈಗೊಂಡಿದ್ದಾರೆ.
Next Story