ಅರಸು ಹೆಸರಿನಲ್ಲಿ ‘ಅರ್ಥಪೂರ್ಣ ಕಾರ್ಯಕ್ರಮ’ಗಳ ಅನುಷ್ಠಾನ: ಮುಖ್ಯಮಂತ್ರಿ ಕುಮಾರಸ್ವಾಮಿ | Vartha Bharati- ವಾರ್ತಾ ಭಾರತಿ

---

ಅರಸು ಹೆಸರಿನಲ್ಲಿ ‘ಅರ್ಥಪೂರ್ಣ ಕಾರ್ಯಕ್ರಮ’ಗಳ ಅನುಷ್ಠಾನ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜೂ. 6: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಾಕಿ ಕೊಟ್ಟ ಮೇಲ್ಪಂಕ್ತಿ ಹಾಗೂ ಮಾರ್ಗದರ್ಶನದಂತೆ ಅರಸು ಅವರ ಹೆಸರಿನಲ್ಲಿ ಸರ್ವರಿಗೂ ನ್ಯಾಯ ಒದಗಿಸುವ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರಾಜ್ಯ ಸರಕಾರ ರೂಪಿಸಿ ಅನುಷ್ಠಾನಕ್ಕೆ ತರಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸಾಮಿ ಪ್ರಕಟಿಸಿದ್ದಾರೆ.

ಬುಧವಾರ ವಿಧಾನಸೌಧದ ಆವರಣದಲ್ಲಿ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸು ಅವರ 36ನೆ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಅರಸು ಅವರ ಪ್ರತಿಮೆಯ ಬಳಿ ಇರುವ ಭಾವಚಿತ್ರಕ್ಕೆ ಕುಮಾರಸ್ವಾಮಿ ಪುಷ್ಪನಮನ ಸಲ್ಲಿಸಿದರು.

ಆನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ದೇವರಾಜ ಅರಸು ಅವರು ಕೇವಲ ಹಿಂದುಳಿದ ವರ್ಗಗಳ ನಾಯಕರಾಗಿರಲಿಲ್ಲ. ರಾಜ್ಯದ ಎಲ್ಲ ಜನತೆಯ ಸಮಗ್ರ ನಾಯಕರಾಗಿದ್ದರು. ಅರಸು ಅವರು ರೂಪಿಸಿದ್ದ ಜನಪರ ಕಾರ್ಯಕ್ರಮಗಳು ಅವರನ್ನು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಮೇರು ಪರ್ವತವನ್ನಾಗಿಸಿತ್ತು ಎಂದು ಸ್ಮರಿಸಿದರು.

ಅರಸು ಅವರಿಗೆ ಅರಸು ಅವರೇ ಸಾಟಿ. ಅರಸು ಅವರು ಮಾಡಿದ ಕೆಲಸವನ್ನು ಬೇರೆ ಯಾರೂ ಮಾಡಲಾಗದು. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿಕೂಟ ಸರಕಾರ ಅರಸು ಅವರ ಹೆಸರಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಈ ನಾಡುಕಂಡ ಮೇರು ರಾಜಕೀಯ ಮುತ್ಸದ್ದಿಗೆ ಗೌರವ ಸಲ್ಲಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಹಾಗೂ ಶಾಸಕ ಎಚ್.ವಿಶ್ವನಾಥ್, ಮಾಜಿ ಸಚಿವ ಎಚ್.ಆಂಜನೇಯ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಸೇರಿದಂತೆ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top