ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿಲ್ಲ: ರಾಮಲಿಂಗಾರೆಡ್ಡಿ
ಬೆಂಗಳೂರು, ಜೂ.8: ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿಲ್ಲ, ಈ ಸಂಬಂಧ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಣೆ ನೀಡಿದ್ದಾರೆ.
ಸಚಿವ ಸಂಪುಟದಲ್ಲಿ ಸ್ಥಾನ ಲಭಿಸದ ಕಾರಣ ಬಿಜೆಪಿಯವರು ನನ್ನನ್ನು ಸಂಪರ್ಕಿಸಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂದು ಬಿತ್ತರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಸದ್ಯ ನಾನು ನನ್ನ ಮಗಳ ಜಯನಗರ ಕ್ಷೇತ್ರದ ಚುನಾವಣೆಯಲ್ಲಿ ತೊಡಗಿಕೊಂಡಿದ್ದೇನೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story