ಪರೀಕ್ಷಾ ಪ್ರಾಧಿಕಾರಕ್ಕೆ 10 ಕೋಟಿ ರೂ. ಚೆಕ್ ಹಸ್ತಾಂತರ
ಬೆಂಗಳೂರು, ಜೂ.28: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 10 ಕೋಟಿ ರೂ. ಚೆಕ್ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ವಿನೋತ್ಪ್ರಿಯಾಗೆ ಹಸ್ತಾಂತರಿಸಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಶಕ್ತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ಅಲ್ಪಸಂಖ್ಯಾತರ ಇಲಾಖೆ ಸರಕಾರದ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಕರ್ನಾಟಕ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಇಸ್ಲಾವುದ್ದೀನ್ ಜೆ. ಗದ್ಯಾಳ ಸೇರಿದಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Next Story