ನರ್ಸಿಂಗ್ ಕೋರ್ಸ್ ತರಬೇತಿ ಭತ್ತೆ: ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಧಾರವಾಡ, ಆ.3: 2018-19ನೇ ಸಾಲಿನ ಸರಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಜಿ.ಎನ್.ಎಂ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ಪ್ಯಾರಾಮೆಡಿಕಲ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳ ಅಭ್ಯರ್ಥಿಗಳಿಗೆ ತರಬೇತಿ ಭತ್ತೆ ನೀಡಲು ಅರ್ಜಿ ಆಹ್ವಾನಿಸಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆ.25ರೊಳಗಾಗಿ ಆಯಾ ಕಾಲೇಜುಗಳ ಪ್ರಾಚಾರ್ಯರ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಧಾರವಾಡದ ಕೆ.ಸಿ.ಪಾರ್ಕ್ ಅಂಚೆ ಕಚೇರಿ ಎದುರಿನ ಮಂದಿ ಪ್ಲಾಜಾದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 0836-2971590, 2971132 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story