ರಾಜ್ಯದಲ್ಲಿ ಮೂರು ಮಂದಿ ಸಿಎಂ: ಬಿಜೆಪಿ ವ್ಯಂಗ್ಯ
ಬೆಂಗಳೂರು, ಆ. 6: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೂ, ಮೂರು ಮಂದಿ ಸಿಎಂಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ರಾಜ್ಯದಲ್ಲಿ ಮೂವರು ಸಿಎಂಗಳಿದ್ದಾರೆ. ಆ ಪೈಕಿ ಎಚ್.ಡಿ.ಕುಮಾರಸ್ವಾಮಿಯವರು ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ. ಸಚಿವ ಎಚ್.ಡಿ.ರೇವಣ್ಣ ಸೂಪರ್ ಸಿಎಂ, ಮಾಜಿ ಪ್ರಧಾನಿ ದೇವೇಗೌಡ ಸುಪ್ರೀಂ ಸಿಎಂ ಆಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಒಂದೇ ರಾಜ್ಯದಲ್ಲಿ ಹಲವು ಮಂದಿ ಮುಖ್ಯಮಂತ್ರಿಗಳಾಗಿರುವುದು ಕರ್ನಾಟಕದಲ್ಲಿ ಮಾತ್ರ. ಇಷ್ಟೆಲ್ಲ ಮುಖ್ಯಮಂತ್ರಿಗಳಿದ್ದರೂ ರಾಜ್ಯದಲ್ಲಿ ಸರಕಾರ ಮಾತ್ರ ಇನ್ನೂ ಕಾರ್ಯಾರಂಭ ಮಾಡಿಲ್ಲ. ದೇವೇಗೌಡರ ಕುಟುಂಬ ರಾಜ್ಯದಲ್ಲಿ ನಿಜವಾದ ಸಿಎಂ ಯಾರು ಎನ್ನುವುದನ್ನು ಮೊದಲು ನಿರ್ಧರಿಸಬೇಕು ಎಂದು ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
Next Story