ಬಾಲಕಿಗೆ ಲೈಂಗಿಕ ಕಿರುಕುಳ: ಬಂಧನ
ಬೆಂಗಳೂರು, ಆ.8: ಬುದ್ಧಿಮಾಂದ್ಯ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರಕುಳ ನೀಡಿರುವ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ಎಚ್ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ನಗರದ ನಿವಾಸಿ ಶಿವಪ್ಪ(48) ಎಂಬಾತ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಮನೆಯಲ್ಲಿ ಬಾಲಕಿ ಮಲಗಿದ್ದಾಗ ಆರೋಪಿ ಈ ಕೃತ್ಯವೆಸಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
Next Story