ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಬೆಂಗಳೂರು, ಆ.11: ಪಾದಚಾರಿ ರಸ್ತೆಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 2ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ ಹಾಗೂ ಮೊಬೈಲನ್ನು ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾಲೂರು ತಾಲೂಕಿನ ರಾಜ್ ಗೋಪಾಲ್(66) ಬಂಧಿತ ಆರೋಪಿ. ನಗರದ ಹಲಸೂರು ಬಸ್ ನಿಲ್ದಾಣದ ಪಾದಚಾರಿ ರಸ್ತೆ ಗಾಂಜಾ ಮಾರುತ್ತಿದ್ದ ವೇಳೆ ಬಂಧಿಸಲಾಗಿದೆ. ಈತ ಆಂಧ್ರಪ್ರದೇಶದಿಂದ ಗಾಂಜಾ ಖರೀದಿಸಿ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮಧ್ಯವರ್ತಿಗಳಿಗೆ ಅಕ್ರಮವಾಗಿ ಮಾರಾಟ ಮಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story