ಗೌರಿ ಲಂಕೇಶ್ ಹತ್ಯೆಗೆ ಬಳಸಲಾಗಿದ್ದ ಬೈಕ್ ಪತ್ತೆ
ಬೆಂಗಳೂರು, ಆ.28: ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಯ ಸಂದರ್ಭ ಆರೋಪಿಗಳು ಬಳಸಿದ್ದರು ಎನ್ನಲಾದ ಬೈಕ್ ಒಂದು ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಟಿಎಸ್ ವಶದಲ್ಲಿರುವ ಶರದ್ ಕಲಸ್ಕರ್ ವಿಚಾರಣೆ ವೇಳೆ ಈ ವಿಷಯವನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಟಿಎಸ್ ತಂಡ ಇಂದು ಮಹಾರಾಷ್ಟ್ರಕ್ಕೆ ತೆರಳಲಿದೆ ಎನ್ನಲಾಗಿದೆ.
ಗೌರಿ ಲಂಕೇಶ್ ಹತ್ಯೆಗೂ ಮುನ್ನ ಅವರ ಮನೆ ಸಮೀಪ ಬೈಕೊಂದು ಸಂಶಯಾಸ್ಪದ ರೀತಿಯಲ್ಲಿ ಸಂಚರಿಸಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
Next Story