ಬೆಂಗಳೂರು: ಪತಿಯ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ
ಬೆಂಗಳೂರು, ಆ.29: ಪತಿಯ ಅನೈತಿಕ ಸಂಬಂಧದಿಂದ ಮನನೊಂದು ಪತ್ನಿಯೊಬ್ಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಜೆ.ಪಿ.ನಗರದಲ್ಲಿ ನಡೆದಿದೆ ಎನ್ನಲಾಗಿದೆ.
ನಗರದ ದೇವಿಕಾ(32) ಆತ್ಮಹತ್ಯೆ ಮಾಡಿಕೊಂಡಿರುವ ಪತ್ನಿ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಿಕಾ ಮತ್ತು ಪತಿ ಸುನೀಲ್ ಕುಮಾರ್ ವೃತ್ತಿಯಲ್ಲಿ ಇಬ್ಬರು ಶಿಕ್ಷಕರಾಗಿದ್ದು, ಪ್ರೀತಿಸಿ ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಎರಡು ವರ್ಷದ ಪುಟ್ಟ ಮಗು ಇದೆ. ಆದರೆ, ಇತ್ತೀಚೆಗೆ ಸುನೀಲ್ ಕುಮಾರ್ ಇನ್ನೊಬ್ಬ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಜೆಪಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story