ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ
ಬೆಂಗಳೂರು, ಆ. 30: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಒಂದರಿಂದ 10ನೆ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ (ಮೆಟ್ರಿಕ್ ಪೂರ್ವ) ಹಿಂ.ವರ್ಗಗಳ ವಿದ್ಯಾರ್ಥಿಗಳಿಂದ ಕೇಂದ್ರ ಪುರಸ್ಕೃತ ಹಾಗೂ ರಾಜ್ಯ ಸರಕಾರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕೇಂದ್ರ ಪುರಸ್ಕೃತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಕುಟುಂಬದ ಆದಾಯಮಿತಿ 2.50ಲಕ್ಷ ರೂ., ಎಲ್ಲ ಪ್ರವರ್ಗಗಳಿಗೆ, ಹಾಗೂ ರಾಜ್ಯ ಸರಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಕುಟುಂಬದ ಆದಾಯ ಮಿತಿ 1ಲಕ್ಷ ರೂ., ವಾರ್ಷಿಕ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಮಾತ್ರ, 44,500ರೂ.ವಾರ್ಷಿಕ ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂ.ವರ್ಗಗಳಿಗೆ ನಿಗದಿಪಡಿಸಲಾಗಿದೆ.
ಕೇಂದ್ರ ಪುರಸ್ಕೃತ ಅನುದಾನವನ್ನು ಅತ್ಯಂತ ಕಡಿಮೆ ಆದಾಯ ಮತ್ತು ಮೆರಿಟ್ ಇರುವ ವಿದ್ಯಾರ್ಥಿಗಳಿಗೆ ಅನುದಾನ ಲಭ್ಯತೆ ಆಧರಿಸಿ ಹಣ ಮಂಜೂರು ಮಾಡಲಾಗುವುದು. ಅನಂತರ ಇನ್ನುಳಿದ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಮೆರಿಟ್ ಆಧಾರದ ಮೇಲೆ ರಾಜ್ಯ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುವುದು.
ಅರ್ಜಿ ಸಲ್ಲಿಸಲು ದಾಖಲೆಗಳು : ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್-ಐಡಿ (ಎಸ್ಎಟಿಎಸ್-ಐಡಿ) ಸ್ಯಾಟ್ಸ್ ಐಡಿ ತಿಳಿಯಲು ವೆಬ್ ವಿಳಾಸ: http://sts.karnataka.gov.in ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ, ಆದಾಯ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ, ಸರಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿ ನಿಲಯದ ಪ್ರವೇಶ ಸಂಖ್ಯೆ: (ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು), ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ (ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು), ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ ಆಧಾರ್ ನೋಂದಣಿ ಮಾಡಿಸಿದ ಇ.ಐ.ಡಿ. ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಐಎಫ್ಎಸ್ಸಿ ಸಂಖ್ಯೆ. ಬ್ಯಾಂಕಿನ ವಿಳಾಸ, ಪೋಷಕರ ಆಧಾರ ನಂಬರ್ಗೆ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ ಹಾಗೂ ಭೌತಿಕ ಅನುಮತಿ ಪತ್ರ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ www.ssp. karnataka. gov.in ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು/ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ www. backwardclasses.kar.nic.in ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.