ಸೆ.1 ರಂದು ಕೆಂಪೇಗೌಡ ಪ್ರಶಸ್ತಿ ಪ್ರದಾನ
ಬೆಂಗಳೂರು, ಆ.31: ಬಿಬಿಎಂಪಿ ವತಿಯಿಂದ ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಪೌರಕಾರ್ಮಿಕರ ದಿನಾಚರಣೆ ಸಮಾರಂಭ ಸೆ.1 ರಂದು ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ನಗರದ ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಡಾ.ರಾಜ್ಕುಮಾರ್ ಗಾಜಿನ ಮನೆಯಲ್ಲಿ ದಿನಾಚರಣೆ ಸಮಾರಂಭ ನಡೆಯಲಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರೆ, ಸಂಜೆ 5ಗಂಟೆಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಪ್ರಸ್ತುತ ಸಾಲಿನಲ್ಲಿ 375 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.
Next Story