ಬೆಂಗಳೂರು: ಮಾರಕಾಸ್ತ್ರಗಳಿಂದ ಬೆದರಿಸಿ ಹಣ ದರೋಡೆ
ಬೆಂಗಳೂರು, ಸೆ.5: ವ್ಯಕ್ತಿಯೊಬ್ಬನಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ಹಣ ಕಸಿದು ಪರಾರಿಯಾಗಿರುವ ಘಟನೆ ಇಲ್ಲಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮೈಸೂರು ರಸ್ತೆಯ ಮಸೀದಿಯೊಂದರ ಬಳಿ ರಾಜೇಶ್ ಎಂಬುವವರು ನಿಂತಿದ್ದರು. ಈ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಸಿ ಹಣ ಕಸಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
Next Story