ಮಾಣಿಪ್ಪಾಡಿ ವರದಿ ಮಂಡನೆಯ ವಿಳಂಬವು ಮೇಲ್ನೋಟಕ್ಕೆ ನ್ಯಾಯಾಂಗ ನಿಂದನೆಯಂತೆ ಕಾಣುತ್ತಿದೆ: ಹೈಕೋರ್ಟ್
ಬೆಂಗಳೂರು, ಸೆ.5: ವಕ್ಫ್ ಮಂಡಳಿ ಸ್ಥಿರಾಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸುವುದಾಗಿ ಮುಚ್ಚಳಿಕೆ ನೀಡಿದ್ದ ಸರಕಾರ ಇನ್ನೂ ವರದಿ ಮಂಡಿಸದೆ ತಡ ಮಾಡುತ್ತಿರುವುದು ಮೇಲ್ನೋಟಕ್ಕೆ ನ್ಯಾಯಾಂಗ ನಿಂದನೆ ಆಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ವರದಿಯನ್ನು 2016ರ ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಇನ್ನೂ ಸಲ್ಲಿಸಿಲ್ಲ ಎಂದು ಆರೋಪಿಸಿ ಮಾಜಿ ಸಚಿವ ಎಸ್.ಕೆ.ಕಾಂತ ಅವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ನೇತೃತ್ವದ ವಿಭಾಗೀಯ ಪೀಠವು ಸರಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಆದಾಗ್ಯೂ, ಇನ್ನೂ ನಾಲ್ಕು ವಾರಗಳ ಗಡುವು ನೀಡಲಾಗುತ್ತಿದೆ ಎಂದು ತಿಳಿಸಿ ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿದೆ.
Next Story