ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಬಹು ಕೋಟಿ ಸಂಪತ್ತು ಪತ್ತೆ ಪ್ರಕರಣ: ಇಡಿ ಗೆ ವರ್ಗಾವಣೆ
ಬೆಂಗಳೂರು, ಸೆ.13: ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಲಾಕರ್ಗಳಲ್ಲಿ ಬಹುಕೋಟಿ ಸಂಪತ್ತು ಪತ್ತೆ ಪ್ರಕರಣವನ್ನು ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ವರ್ಗಾಯಿಸಿದ್ದಾರೆ ಎಂದು ವರದಿಯಾಗಿದೆ.
ಜುಲೈ 20 ರಂದು ಬೆಂಗಳೂರಿನ ಬೌರಿಂಗ್ ಇನ್ಸ್ ಸ್ಟಿಟ್ಯೂಟ್ ಲಾಕರ್ನಲ್ಲಿ ದಾಖಲೆ ಇಲ್ಲದ ಹಣ, ದಾಖಲೆ ಪತ್ರಗಳು ಪತ್ತೆಯಾಗಿದ್ದವು. ಬಳಿಕ ಆಡಳಿತ ಮಂಡಳಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿತ್ತು.
ಆದರೆ ಲಾಕರ್ನಲ್ಲಿ ದಾಖಲೆ ಇಲ್ಲದ ಭಾರಿ ಹಣ ಪತ್ತೆಯಾಗಿದ್ದರಿಂದ ಪೊಲೀಸರು ಐಟಿಗೆ ಮಾಹಿತಿ ನೀಡಿದ್ದರು. ಇದೀಗ ಐಟಿ ಇಲಾಖೆಯೂ, ಪ್ರಕರಣವನ್ನು ಇ.ಡಿ. ಗೆ ವರ್ಗಾಯಿಸಿದೆ ಎನ್ನಲಾಗಿದೆ.
Next Story