ಸೆ.18: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮನ
ಬೆಂಗಳೂರು, ಸೆ.17: ದಕ್ಷಿಣ ಭಾರತ ರಾಜ್ಯಗಳ ಕೌನ್ಸಿಲ್ ಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ರಾಜನಾಥ್ಸಿಂಗ್ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ದಕ್ಷಿಣ ಭಾರತ ರಾಜ್ಯಗಳ ಕೌನ್ಸಿಲ್ನ 28ನೆ ಸಭೆಯ ಅಧ್ಯಕ್ಷತೆಯನ್ನು ರಾಜನಾಥ್ಸಿಂಗ್ ವಹಿಸಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಇನ್ನಿತರ ಗಣ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story