ಕನ್ನಡ ಕಲಿಯುವ ನೂತನ ಜಾಲತಾಣಕ್ಕೆ ಸೆ.19 ರಂದು ಚಾಲನೆ
ಬೆಂಗಳೂರು, ಸೆ.18: ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸೇವೆಗಳನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಒದಗಿಸಲು ಮತ್ತು ಕನ್ನಡೇತರರು ಕನ್ನಡ ಕಲಿಯಲು ಸಿದ್ಧಪಡಿಸಿರುವ ನೂತನ ಜಾಲತಾಣವನ್ನು ಕನ್ನಡ ಮತ್ತು ಸಂಸ್ಕತಿ ಸಚಿವೆ ಡಾ.ಜಯಮಾಲಾ ಸೆ.19 ರಂದು ಚಾಲನೆ ನೀಡಲಿದ್ದಾರೆ.
ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ವಾರ್ತಾ ಸೌಧದಲ್ಲಿ ಮಧ್ಯಾಹ್ನ 3.30ಕ್ಕೆ ನೂತನ ಜಾಲತಾಣಕ್ಕೆ ಚಾಲನೆ ನೀಡಲಾಗುತ್ತದೆ. ಈ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್ ಉಪಸ್ಥಿತರಿರುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಸಕ್ರಿಯವಾಗಿರುವ ಕನ್ನಡ ಅಧ್ಯಯನ ಪೀಠವು ಕನ್ನಡೇತರರು ಕನ್ನಡವನ್ನು ಕಲಿಯಲು ಸಹಾಯ ಮಾಡುವಂತಹ ಹೊಸ ಬಗೆಯ ಜಾಲ ತಾಣವನ್ನು ಸಿದ್ಧಪಡಿಸಲಾಗಿದೆ.
Next Story