ತಿಂಗಳಿಗೊಮ್ಮೆ ಜನತಾದರ್ಶನ: ಸಿಎಂಗೆ ವೈದ್ಯರ ಸಲಹೆ
ಬೆಂಗಳೂರು, ಸೆ. 19: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸೆ.1ರಿಂದ ಜನತಾ ದರ್ಶನಕ್ಕೆ ಅಧಿಕೃತ ಚಾಲನೆ ನೀಡಿದ್ದು, ಕಾರ್ಯಕ್ರಮವನ್ನು ತಿಂಗಳಿಗೊಮ್ಮೆ ನಡೆಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಜನತಾದರ್ಶನ ಕಾರ್ಯಕ್ರಮ ತಿಂಗಳಿಗೊಮ್ಮೆ ನಡೆಯಲಿದೆ. ಒಂದು ತಿಂಗಳು ಬೆಂಗಳೂರಿನಲ್ಲಿ ಒಂದು ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ನಡೆಸಲಾಗುವುದು. ದಿನಾಂಕ ಹಾಗೂ ಸ್ಥಳವನ್ನು ಮುಂಚಿತವಾಗಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
Next Story