ಬೆಂಗಳೂರು ಅಭಿವೃದ್ಧಿಗೆ 570 ಕೋಟಿ ರೂ. ಅನುದಾನ ಬಿಡುಗಡೆ
ಸಾಂದರ್ಭಿಕ ಚಿತ್ರ
ಬೆಂಗಳೂರು ಸೆ. 19: ಬೆಂಗಳೂರಿನಲ್ಲಿ ವಿವಿಧ ಮೂಲಸೌಲಭ್ಯ ಕಾಮಗಾರಿಗಳಿಗೆ ಬಿಬಿಎಂಪಿಗೆ 570 ಕೋಟಿ ರೂ.ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಸರಕಾರಿ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನಲ್ಲಿ ಪ್ರಗತಿಯಲ್ಲಿರುವ ಗ್ರೇಡ್ ಸೆಪರೇಟರ್, ಫ್ಲೈ ಓವರ್ಗಳು, ರಸ್ತೆ ಅಭಿವೃದ್ಧಿ, ಮಳೆನೀರು ಚರಂಡಿ ಮತ್ತಿತರ ಮೂಲಸೌಲಭ್ಯಗಳನ್ನು ಒದಗಿಸುವ ಉದ್ದೇಶಕ್ಕೆ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
Next Story