ವಿಧಾನ ಪರಿಷತ್ ನೂತನ ಸದಸ್ಯರಾಗಿ ಸುನಿಲ್ಗೌಡ ಪಾಟೀಲ್ ಪ್ರಮಾಣ ವಚನ
ಬೆಂಗಳೂರು, ಸೆ. 20: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಚುನಾಯಿತರಾಗಿರುವ ಸುನೀಲಗೌಡ ಬಸವನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಗುರುವಾರ ವಿಧಾನಸೌಧದ ಮೊದಲ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನವನ್ನು ಸದಸ್ಯರಾಗಿ ಸುನಿಲ್ ಗೌಡ ಪಾಟೀಲ್ ಅವರಿಗೆ ಬೋಧಿಸಿದರು. ಭಗವಂತನ ಹೆಸರಿನಲ್ಲಿ ಸುನೀಲ್ಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನೂತನ ಸದಸ್ಯ ಸುನಿಲ್ಗೌಡ ಪಾಟೀಲ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಈ ವೇಳೆ ಮಾಜಿ ಸಚಿವರಾದ ಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್, ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಮ್ಮ ಹಾಜರಿದ್ದರು.
Next Story