'ಕುಮಾರಸ್ವಾಮಿ ನಗರ ನಕ್ಸಲ್' ಹೇಳಿಕೆ: ಬಿಜೆಪಿ ನಾಯಕರ ವಿರುದ್ಧ ಪೊಲೀಸರಿಗೆ ದೂರು
ಬೆಂಗಳೂರು, ಸೆ.22: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿ ನಾಯಕರು ಟೀಕಿಸುವ ಭರದಲ್ಲಿ ನಗರ ನಕ್ಸಲ್ ಎಂದು ಅಸಂವಿಧಾನಕ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಪೊಲೀಸರಿಗೆ ಜೆಡಿಎಸ್ ದೂರು ನೀಡಿ, ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.
ಶನಿವಾರ ಜೆಡಿಎಸ್ ವಕ್ತಾರ ರಮೇಶ್ ಬಾಬು, ಜೆಡಿಎಸ್ ಕಾನೂನು ಘಟಕದ ಎ.ಪಿ.ರಂಗನಾಥ್ ಅವರು ನಗರದ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಅವರಿಗೆ ದೂರು ನೀಡಿ, ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಬಿಜೆಪಿಯ ಮುಖಂಡರಾದ ಶೋಭಾ ಕರಂದ್ಲಾಜೆ, ಆರ್.ಅಶೋಕ್, ರೇಣುಕಾಚಾರ್ಯ, ಬಸನಗೌಡಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
Next Story