ಬೆಂಗಳೂರು: ರಸ್ತೆ ಅಪಘಾತಕ್ಕೆ ಯುವತಿ ಬಲಿ
ಬೆಂಗಳೂರು, ಅ.13: ಕಾರೊಂದು ನಿಯಂತ್ರಣ ತಪ್ಪಿ ಹಳೆ ವಿಮಾನ ನಿಲ್ದಾಣ ರಸ್ತೆಯ ಎಸಿಎಸ್ ಕೇಂದ್ರದ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುಜರಾತ್ ಮೂಲದ ದೇವಾನ್ಸಿ (24) ಸಾವನ್ನಪ್ಪಿರುವ ಯುವತಿ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಬೆಳಗಿನ ಜಾವ ದೇವಾನ್ಸಿ ಅವರು ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎಸಿಎಸ್ ಕೇಂದ್ರದ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದೇವಾನ್ಸಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಈ ಸಂಬಂಧ ದೂರು ದಾಖಲಿಸಿ ಕೊಂಡಿರುವ ಹಲಸೂರು ಸಂಚಾರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story