ವಿದ್ಯಾರ್ಥಿ ರಿಯಾಯಿತಿ ಪಾಸ್ಗೆ ಅರ್ಜಿ ಆಹ್ವಾನ
ಬೆಂಗಳೂರು, ಅ.23: ಬಿಎಂಟಿಸಿ 2018-19ನೆ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿಗಾಗಿ ಆನ್ಲೈನ್ www.mybmtc.com ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಸ್ಮಾರ್ಟ್ಕಾರ್ಡ್ ಮಾದರಿಯ ವಿದ್ಯಾರ್ಥಿ ಬಸ್ ಪಾಸನ್ನು ಪಡೆಯಲು ಕಾಲಾವಕಾಶ ವಿಸ್ತರಿಸಲಾಗಿದೆ. ಹೀಗಾಗಿ ವಿದ್ಯಾರ್ಥಿ ಪಾಸ್ ಪಡೆಯದೆ ಇರುವ ವಿದ್ಯಾರ್ಥಿಗಳು ಶಾಲಾ/ಕಾಲೇಜಿನ ಗುರುತಿನ ಚೀಟಿ ಮತ್ತು ಶುಲ್ಕ ಪಾವತಿಸಿದ ರಸೀದಿಯೊಂದಿಗೆ ಅ.31ರವರೆಗೆ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಈಗಾಗಲೇ ಶೇ.80 ರಷ್ಟು ವಿದ್ಯಾರ್ಥಿಗಳಿಗೆ ಸ್ಮಾರ್ಟ್ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ ಪಾಸುಗಳನ್ನು ವಿತರಣೆ ಮಾಡಲಾಗಿದೆ. ಉಳಿದಂತೆ ಶೇ.20ರಷ್ಟು ವಿದ್ಯಾರ್ಥಿಗಳು ವಿದ್ಯಾರ್ಥಿ ಪಾಸುಗಳನ್ನು ಪಡೆಯಬೇಕಾಗಿರುತ್ತದೆ.
ಈಗಿರುವ ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿ ಬಸ್ ಪಾಸಿಗಾಗಿ ಆಗಮಿಸುವ ವಿದ್ಯಾರ್ಥಿಗಳ ಸಂಖ್ಯೆಯು ಕಡಿಮೆ ಇರುತ್ತದೆ. ಆದ್ದರಿಂದ ಇನ್ನು ವಿದ್ಯಾರ್ಥಿ ಪಾಸನ್ನು ಪಡೆಯದ ವಿದ್ಯಾರ್ಥಿಗಳು ಕೂಡಲೇ ವಿದ್ಯಾರ್ಥಿ ಪಾಸುಗಳನ್ನು ಕೆಬಿಎಸ್/ ಶಾಂತಿನಗರ ಬಸ್ ನಿಲ್ದಾಣಗಳಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.