ಚಾಕು ತೋರಿಸಿ ನಗದು, ಮೊಬೈಲ್ ಕಳವು
ಬೆಂಗಳೂರು, ಅ.25: ರಸ್ತೆ ಬದಿ ನಿಂತು ಮೊಬೈಲ್ ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡುತ್ತಿದ್ದ ವ್ಯಕ್ತಿಗೆ ಚಾಕು ತೋರಿಸಿ 5000 ರೂ. ನಗದು ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅನ್ನಪೂರ್ಣೇಶ್ವರಿನಗರ ನಿವಾಸಿ ಹರಿಕುಮಾರ್ ದರೋಡೆಗೆ ಒಳಗಾದವರು. ಗುರುವಾರ ಬೆಳಗಿನ ಜಾವ 2.15ರ ಸುಮಾರಿಗೆ ರಸ್ತೆ ಬದಿ ನಿಂತು ಮೊಬೈಲ್ನಲ್ಲಿ ಕ್ಯಾಬ್ ಬುಕ್ ಮಾಡುತ್ತಿದ್ದರು. ಈ ವೇಳೆ ಒಂದೇ ಬೈಕ್ನಲ್ಲಿ ಬಂದ ಮೂವರು ದರೋಡೆಕೋರರು ಚಾಕು ತೋರಿಸಿ, ಅವರ ಬಳಿ ಇದ್ದ 5000 ರೂ. ನಗದು ಹಾಗೂ ಒಂದು ಮೊಬೈಲ್ ಫೋನನ್ನು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.
Next Story