ಎಸ್ಎಫ್ಐ ಪದಾಧಿಕಾರಿಗಳ ಆಯ್ಕೆ
ಬೆಂಗಳೂರು, ನ.3: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ)ನ 16 ನೆ ಅಖಿಲ ಭಾರತ ಸಮ್ಮೇಳನದಲ್ಲಿ ಅಖಿಲ ಭಾರತ ಅಧ್ಯಕ್ಷರಾಗಿ ವಿ.ಪಿ.ಸಾನು ಹಾಗೂ ಪ್ರಧಾನ ಕಾರ್ಯದರ್ಶಿ ಮಯೂಕ್ ಬಿಸ್ವಾಸ್ ಸೇರಿದಂತೆ 93 ಜನರ ಕೇಂದ್ರ ಸಮಿತಿ ಆಯ್ಕೆಯಾಗಿದೆ.
ಕರ್ನಾಟಕದಿಂದ ರಾಜ್ಯ ಅಧ್ಯಕ್ಷ ವಿ.ಅಂಬರೀಶ್, ಕಾರ್ಯದರ್ಶಿ ಗುರುರಾಜ್ ದೇಸಾಯಿ, ಉಪಾಧ್ಯಕ್ಷ ಶಬ್ಬೀರ್ ಹಾಗೂ ಮಂಗಳೂರು ಜಿಲ್ಲಾ ಕಾರ್ಯದರ್ಶಿ ಮಾಧುರಿ ಬೋಳಾರ್ ಕೇಂದ್ರ ಸಮಿತಿ ಆಯ್ಕೆಯಾಗಿದ್ದಾರೆ ಎಂದು ಎಸ್ಎಫ್ಐ ರಾಜ್ಯ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
Next Story