ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ: ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ
ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ
ಬೆಂಗಳೂರು, ನ.12:: ಇಂದು ಬೆಳಗ್ಗೆ ನಿಧನ ಹೊಂದಿದ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಗೌರವಾರ್ಥ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚಾರಣೆ ಮಾಡಲಾಗುವುದು. ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಮುಖ್ಯಮಂತ್ರಿಯಿಂದ ಅಂತಿಮ ದರ್ಶನ:
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಿಂದ ಹೊರಟು ನೇರವಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ.
Next Story