ಅನಂತ್ ಕುಮಾರ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ
ಬೆಂಗಳೂರು, ನ.12: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಎನ್.ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.
ವಾರಣಾಸಿಯಿಂದ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ಮೋದಿ ರಸ್ತೆಯ ಮೂಲಕ ನೇರವಾಗಿ ಅನಂತ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು, ಅವರ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವ ಜೆ.ಪಿ.ನಡ್ಡಾ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Next Story