ನ.25ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ?
ಬೆಂಗಳೂರು, ನ. 14: ಉಪ ಚುನಾವಣೆ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನ.25ರ ವೇಳೆ ನಡೆಯುವ ಸಾಧ್ಯತೆಗಳಿವೆ.
ಪ್ರತಿವರ್ಷದಂತೆ ನ.1ರಂದು ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನ.3ರ ಉಪ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಿದ್ದು. ನ.15ಕ್ಕೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ‘ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ’ ಆಯ್ಕೆಯಲ್ಲಿ ಗೊಂದಲ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಗೊತ್ತಾಗಿದೆ.
63ನೆ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ 63 ಮಂದಿಗೆ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಮಿತಿಗೊಳಿಸುವ ಸಾಧ್ಯತೆಗಳಿದ್ದು, ಈ ಸಂಬಂಧ ಹೈಕೋರ್ಟ್ ನಿರ್ದೇಶನವನ್ನು ನೀಡಿದೆ. ಅಲ್ಲದೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಅವರು ನ.30ಕ್ಕೆ ಸೇವಾ ನಿವೃತ್ತಿ ಹೊಂದಲಿದ್ದು, ಅದಕ್ಕೂ ಮೊದಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
Next Story