ಮೀಟೂ ಪ್ರಕರಣ: ನಟ ಅರ್ಜುನ್ ಸರ್ಜಾರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ
ಬೆಂಗಳೂರು, ನ.14: ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಒಡ್ಡಿದ ಆರೋಪದ ಸಂಬಂಧ ಶ್ರುತಿ ಹರಿಹರನ್ ದಾಖಲಿಸಿರುವ ದೂರು ರದ್ದು ಕೋರಿ ನಟ ಅರ್ಜುನ್ ಸರ್ಜಾ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.28ಕ್ಕೆ ಮುಂದೂಡಿದೆ. ಈ ಮೊದಲು ಅರ್ಜುನ್ ಸರ್ಜಾರನ್ನು ಬಂಧಿಸದಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಕೋರಿ ಕೋರಿ ಅರ್ಜುನ್ ಸರ್ಜಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ಕುಮಾರ್ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ.
ನಟಿ ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಈ ಆರೋಪಕ್ಕೆ ಅಷ್ಟೊಂದು ಮಹತ್ವ ಇಲ್ಲ. ಕೇವಲ ಪ್ರಚಾರಕ್ಕಾಗಿ ಸರ್ಜಾ ವಿರುದ್ಧ ಆರೋಪ ಮಾಡಿದ್ದಾರೆ. ಹೀಗಾಗಿ, ಸರ್ಜಾ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕೆಂದು ಸರ್ಜಾ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿಕೊಂಡಿದ್ದಾರೆ.
Next Story