ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ನ.17: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್(ಸಿವಿಲ್)ಗಳ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನ.18 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ನ.25 ಕ್ಕೆ ಮುಂದೂಡಲಾಗಿದೆ.
ಬಳ್ಳಾರಿ ಹಂಪಿ ಉತ್ಸವ ಹಾಗೂ ರಾಣಿ ಚೆನ್ನಮ್ಮ ಮಹಿಳಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಇರುವುದರಿಂದ ಪೊಲೀಸ್ ನೇಮಕಾತಿ ವಿಭಾಗ ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಿದೆ. ಈ ಹಿಂದೆ ಅಭ್ಯರ್ಥಿಗಳಿಗೆ ನೀಡಿದ್ದ ಪ್ರವೇಶ ಪತ್ರಗಳ ಬದಲಿಗೆ ಹೊಸದಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಸೂಚಿಸಿದ್ದಾರೆ.
Next Story