ನ.19: ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ
ಬೆಂಗಳೂರು, ನ.18: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷನ್ನಾಗಿ ನ.19ರಂದು ಡಾ.ಪುಷ್ಪಅಮರನಾಥ್ ಅಧಿಕಾರ ಸ್ವೀಕರಿಸಲಿದ್ದಾರೆ.
ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನೂತನ ಅಧ್ಯಕ್ಷರಾಗಿ ಜವಾಬ್ದಾರಿಯನ್ನು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ವಹಿಸಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿಗಳು, ಸಂಸದರು, ಸಚಿವರು, ಶಾಸಕರು, ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.
Next Story