ಕೆಪಿಎಸ್ಸಿ: ಅಂತಿಮ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು, ನ,23: ಕರ್ನಾಟಕ ಲೋಕಸೇವಾ ಆಯೋಗವು 2016ನೆ ಸಾಲಿನ ರಾಜ್ಯ ಸಿವಿಲ್ ಸೇವೆಗಳಡಿಯ ವಿವಿಧ ಇಲಾಖೆಗಳಲ್ಲಿನ 341 (ಉಳಿಕೆ ಮೂಲವೃಂದ 214+127ಹೈ.ಕ) ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯ ಅಧಿಸೂಚನೆಯನ್ನು ಆಯೋಗದ ವೆಬ್ಸೈಟ್ http://kpsc.kar.nic.in.-Lists-Final ರಡಿಯಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಕರ್ನಾಟಕ ಲೋಕಸೇವಾ ಆಯೋಗವು ವಾಸ್ತುಶಿಲ್ಪ ಇಲಾಖೆಯಲ್ಲಿನ ಆಕೃತಿ ರಚನಕಾರರು 02=01 (ಹೈ.ಕ) ಹುದ್ದೆಗೆ ನ.16 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ತಾತ್ಕಾಲಿಕ ಪಟ್ಟಿ ಪ್ರಕಟಿಸಲಾದ ದಿನಾಂಕದಿಂದ ಏಳು ದಿನದೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.
Next Story