ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಡಿ.1: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಡಿಸೆಂಬರ್ 8ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತಾನು ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರ ಸಮಸ್ಯೆಗಳನ್ನು ನೇರವಾಗಿ ಕೇಳಿ, ಅರ್ಥ ಮಾಡಿಕೊಳ್ಳುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಪಾಲ್ಗೊಳ್ಳಲು ಇಚ್ಛಿಸಿರುವುದಾಗಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಅವರಿಗೆ ತಿಳಿಸಿದ್ದೆ ಎಂದರು.
ನನ್ನ ಮನವಿಯನ್ನು ಪುರಸ್ಕರಿಸಿ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಾರೆ. ನಾನು ಸಭೆಯಲ್ಲಿ ಭಾಗವಹಿಸಿ, ಶಾಸಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.
Next Story